ಸಚಿವ ಈಶ್ವರಪ್ಪನವರನ್ನು ಬಂಧಿಸಿ : ಎಸ್.ಡಿ.ಪಿ.ಐ ಒತ್ತಾಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕುಶಾಲನಗರ ಎಸ್.ಡಿ.ಪಿ.ಐ ಘಟಕದ ವತಿಯಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಈಶ್ವರಪ್ಪರವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರೇ ಮುಖ್ಯ ಕಾರಣವಾಗಿದ್ದಾರೆ ಎಂದು ಸಂತೋಷ್ ಪಾಟೀಲ್ ಬರೆದಿಟ್ಟಿರುವ ಡೆತ್ನೋಟ್ ನಲ್ಲಿ ಈಶ್ವರಪ್ಪನವರ ಹೆಸರು ಬಹಿರಂಗವಾಗಿರುವುದು ಬಹಳ ಆತಂಕಕಾರಿ ವಿಷಯವಾಗಿದೆ. ಆದ್ದರಿಂದ ಈಶ್ವರಪ್ಪನವರನ್ನು ಕೂಡಲೇ ಮಂತ್ರಿ ಸ್ಥಾನದಿಂದ ಮತ್ತು ಶಾಸಕನ ಸ್ಥಾನದಿಂದ ವಜಾಗೊಳಿಸಿ ಬಂಧನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!