ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ!

ಬೆಂಗಳೂರು : ರಾಸಲೀಲೆ ಸಿಡಿ ಬಯಲು ಪ್ರಕರಣ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ.
ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಅವರಿಗೆ ರಮೇಶ್ ಜಾರಕಿಹೊಳಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಅವರು ನಿನ್ನೆ ಬಿಡಗುಡೆ ಮಾಡಿದ್ದರು. ಬಳಿಕ ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.