fbpx

ಸದ್ಯಕ್ಕೆ ಶಾಲೆ ಆರಂಭವಿಲ್ಲ, ಸಂಘಟನೆಗಳ ಜೊತೆ ಚರ್ಚಿಸಿ ಬಳಿಕ ನಿರ್ಧಾರ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭ ಕುರಿತು ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ. ಈ ಸಂಬಂಧ ಮುಂದುವರೆದು ಖಾಸಗಿ ಶಾಲೆಗಳ ಅಸೋಸಿಯೇಷನ್ ಜೊತೆ ಮಾತುಕತೆ ನಡೆಸಿದ್ದೇನೆ. ಮತ್ತೆ ಅವರ ಸಂಘಟನೆ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಶಾಲೆಗಳ ಆರಂಭ ಕುರಿತು ಬೇರೆ ಬೇರೆ ರಾಜ್ಯದಲ್ಲಿರುವ ಸ್ಥಿತಿಗತಿ ಮತ್ತು ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ. ವ್ಯಾಕ್ಸಿನೇಷನ್ ವ್ಯವಸ್ಥೆ ಯಾವ ರೀತಿ ಆಗಿದೆ. ಎಲ್ಲವನ್ನೂ ನೋಡಿಕೊಂಡು ಚರ್ಚೆ ಮಾಡುತ್ತೇನೆ, ನಂತರವೇ ಶಾಲೆಗಳ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

error: Content is protected !!