ಸದ್ಯದಲ್ಲೇ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮಡಿಕೇರಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬೇಕೆಂದು ಮಡಿಕೇರಿ ನಗರಸಭಾ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು ನೇಮಕ ಮಾಡಲಾಗಿದ್ದು, ಚುನಾವಣೆಗೆ ಸೂಕ್ತ ದಿನಾಂಕ ನಿಗದಿಪಡಿಸಲು ಸೂಚನೆ ನೀಡಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ,ಉಪಾಧ್ಯಕ್ಷ ಸ್ಥಾನ ಬಿಸಿಎ ಮಹಿಳೆ ಮೀಸಲು ಮಾಡಲಾಗಿದೆ. ಬಹುಮತ ಸಾಧಿಸಿರುವ ಬಿಜೆಪಿ ಪಕ್ಷದಿಂದ ಅಂತಿಮ ಪಟ್ಟಿ ಸಿದ್ದ ಪಡಿಸಲಾಗುತ್ತದೆ.

error: Content is protected !!