ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಮಡಿಕೇರಿ ಸೆ.07:-ಶಾಸಕರಾದ ಕೆ.ಜಿ.ಬೋಪಯ್ಯ ಅವರ ಶಿಫಾರಸ್ಸಿನಂತೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ ನೂರಂಬಡ ಮಠದ ಪರಿಶಿಷ್ಟ ಜಾತಿ ಕಾಲೋನಿಯ ಬಳಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.