ಸರಕಾರಿ ನೌಕರರಿಗೆ ಹಾಜರಾತಿ ಕಡ್ಡಾಯ!

ಬೆಂಗಳೂರು: ಆರೋಗ್ಯ ಇಲಾಖೆಯ ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ.

ಮುಂದುವರಿದು ನಗರಾಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಇಂಧನ ಇಲಾಖೆ, ಆರ್ಥಿಕ ಇಲಾಖೆ, ಪಶುಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ,f ತೋಟಗಾರಿಕೆ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಶೇ.5೦ರಷ್ಟು ಅಧಿಕಾರಿಗಳು ಮತ್ತು ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶವು ಜೂ.6ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ.

error: Content is protected !!