ಸಾಂಕ್ರಾಮಿಕ ರೋಗಗಳ ನಿಯಂತ್ರಣ 15 ದಿನಕ್ಕೊಮ್ಮೆ ವರದಿ ನೀಡಿ: ಜಿಲ್ಲಾಧಿಕಾರಿ

ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯ, ಮೆದುಳು ಜ್ವರ ಮತ್ತು ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಬಗ್ಗೆ ಸಂಬಂಧಿಸಿದ ಇಲಾಖೆಗಳು ಪ್ರತೀ 15 ದಿನಕ್ಕೊಮ್ಮೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಗಮನಹರಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ ಹಾಗೆಯೇ ಕಂದಾಯ ಹೀಗೆ ಹಲವು ಇಲಾಖೆಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

error: Content is protected !!