fbpx

ಸಾರ್ವಜನಿಕರ ಕುಂದುಕೊರತೆ ವಿಚಾರಣೆಗೆ ನಗರಸಭೆ ಸದಸ್ಯರು ಸಜ್ಜು

ಮಡಿಕೇರಿ ಜೂ.08:-ನಗರಸಭೆ ವತಿಯಿಂದ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಒಳಗೊಂಡಂತೆ ಪ್ರತೀ ಗುರುವಾರ ವಾರ್ಡ್‍ಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ಸ್ಥಳದಲ್ಲಿಯೇ ಪರಿಹರಿಸಲಾಗುತ್ತದೆ.

ಈ ಹಿನ್ನೆಲೆ ಜೂನ್, 09 ರಂದು ಬೆಳಗ್ಗೆ 7 ಗಂಟೆಗೆ ನಗರದ 19 ನೇ ವಾರ್ಡ್‍ನಲ್ಲಿ ಸಾರ್ವಜನಿಕ ಕುಂದುಕೊರತೆ ಆಲಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.

error: Content is protected !!