ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ಸೆ.17:-
ಪ್ರಸಕ್ತ(2022-23) ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಹಾಗೂ ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯ ಕೋಶದಿಂದ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆಗಳು, ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ
ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ವೆಬ್‍ಸೈಟ್ ವಿಳಾಸ https://sevasindhu.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿಯನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.