ಸಾಹಿತಿ ಎಸ್.ಎಲ್ ಭೈರಪ್ಪ ಅವರ ವಿರುದ್ಧ ವಹ್ನಿಕುಲ ಸಂಘದಿಂದ ಪೊಲೀಸ್ ಠಾಣೆಗೆ ದೂರು!

ಬೆಂಗಳೂರು : ತಿಗಳ ಸಮುದಾಯದ ಆರಾಧ್ಯ ದೇವತೆ ದ್ರೌಪದಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಾಹಿತಿ ಎಸ್.ಎಲ್ ಭೈರಪ್ಪ ಅವರ ವಿರುದ್ಧ ವಹ್ನಿಕುಲ ಸಂಘ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಾಹಿತಿ ಭೈರಪ್ಪನವರು ಮೈಸೂರಿನಲ್ಲಿ ನಡೆದ ಸಮಾರಂಭವೊಂದರಲ್ಲಿ ತಿಗಳ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರು ಸಾರ್ವಜನಿಕವಾಗಿ ತಿಗಳ ಸಮುದಾಯದ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮುದಾಯದ ನಾಯಕರು ಎಚ್ಚರಿಕೆ ನೀಡಿದ್ದಾರೆ.

error: Content is protected !!