May 26, 2021

ಸಿಎಂ ಬದಲಾವಣೆ: ರಂಗೇರಿದ ರಾಜಕೀಯ

ಬೆಂಗಳೂರು(ಮೇ.26): ಕೋವಿಡ್‌ ಸಂಕಷ್ಟದ ಮಧ್ಯೆಯೇ ರಾಜ್ಯದ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಪಕ್ಷದ ಕೆಲವು ಶಾಸಕರು ತೆರೆಮರೆಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ.

ಆದರೆ, ಪಕ್ಷದ ಹೈಕಮಾಂಡ್‌ ಮಾತ್ರ ಇದುವರೆಗೆ ಈ ದಿಕ್ಕಿನಲ್ಲಿ ಯಾವುದೇ ರೀತಿಯ ಗಂಭೀರ ಚಿಂತನೆ ನಡೆಸಿಲ್ಲ. ಬದಲಾವಣೆ ಆಗಬೇಕು ಎಂಬ ಕೆಲವು ಶಾಸಕರ ಆಶಯಕ್ಕೆ ಸ್ಪಂದನೆಯನ್ನೂ ವ್ಯಕ್ತಪಡಿಸಿಲ್ಲ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಮುಂದಿನ ಸಿಎಂ ಬಗ್ಗೆ ಚರ್ಚೆ:

ಈ ನಡುವೆ ನಾಯಕತ್ವ ಬದಲಾವಣೆ ಪ್ರಯತ್ನದ ವದಂತಿ ಹಬ್ಬಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆಯೂ ರಾಜ್ಯ ರಾಜಕಾರಣದಲ್ಲಿ ನಡೆದಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ, ಸಂಸದ ಶಿವಕುಮಾರ್‌ ಉದಾಸಿ, ಶಾಸಕರಾದ ಅರವಿಂದ್‌ ಬೆಲ್ಲದ್‌, ಬಸನಗೌಡ ಪಾಟೀಲ ಯತ್ನಾಳ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

error: Content is protected !!