ಸಿದ್ದರಾಮಯ್ಯ ಕಾರಿಗೆ ಅಡ್ಡಿ ಪಡಿಸಿದ 9 ಮಂದಿ ಬಂಧನ: ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಗುಡ್ಡೆಹೊಸೂರು ಬಳಿ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ಕಾಂಗ್ರೆಸ್ ಮುಖಂಡರಿಂದ ಕುಶಾಲನಗರ ಪೊಲೀಸ್ ಠಾಣೆಯಲ್ಲಿ 15ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರ ಮೇಲೆ ಮೊಕದ್ದಮೆ ದಾಖಲಾಗಿದೆ. ಕುಶಾಲನಗರದ 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ತಡರಾತ್ರಿ ನ್ಯಾಯಾಧೀಶರ ಮಂದೆ ಹಾಜರು ಪಡಿಸಿ ಬಿಡುಗಡೆ ಮಾಡಲಾಗಿದೆ.

ಇದೇ ಸಂದರ್ಭ ಪಕ್ಷದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ಠಾಣೆಗೆ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ಭೇಟಿ ನೀಡಿದ್ದು, ಸಿದ್ದರಾಮಯ್ಯ ಪ್ರಚೋದನಕಾರಿ ಹೇಳಿಕೆ ನೀಡಿದರ ಪರಿಣಾಮ ಈ ರೀತಿ ಜನರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಾರೆ, ಅದನ್ನು ಮೊದಲು ನಿಲ್ಲಿಸಲಿ ಎಂದು ರಂಜನ್ ಆಗ್ರಹಿಸಿದರು.

error: Content is protected !!