ಸಿದ್ಧಾಪುರದಲ್ಲಿ ಸಂಸ್ಥಾಪನಾ ದಿನ ಆಚರಣೆ

ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪನ ದಿವಸದ ಅಂಗವಾಗಿ ಸಿದ್ಧಾಪುರ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿರವರ ಹೆಸರಿನಲ್ಲಿ ಸಿದ್ಧಾಪುರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್ ಪ್ರವೀಣ್ ರವರ ನೇತೃತ್ವದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಪಕ್ಷದ ಕಾರ್ಯಕರ್ತರು ಹಾಜರಿದ್ದರು.