fbpx

ಸೆ.04 ರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಪ್ರಸಕ್ತ(2022-23) ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಏರ್ಪಡಿಸಲಾಗಿದೆ.

ಸೆಪ್ಟೆಂಬರ್, 04 ರಂದು ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆಪ್ಟೆಂಬರ್, 05 ರಂದು ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ, ಸೆಪ್ಟೆಂಬರ್, 06 ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಸೆಪ್ಟೆಂಬರ್, 07 ರಂದು ಸೋಮವಾರಪೇಟೆ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನ, ಸೆಪ್ಟೆಂಬರ್, 08 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್, 11 ಮತ್ತು 12 ರಂದು ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ.

ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕೋರಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ. ಮಹಾಬಲ 9980887499, ಮಡಿಕೇರಿ ವೆಂಕಟೇಶ್ 9844326007, ಜಯರಾಂ 9480019815, ಸೋಮವಾರಪೇಟೆ ಸುಬ್ಬಯ್ಯ 8197790350 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ತಿಳಿಸಿದ್ದಾರೆ.

error: Content is protected !!