ಸೆ.12ರಿಂದ ವಿಧಾನ ಮಂಡಲ ಅಧಿವೇಶನ ಶುರು; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಸೆಪ್ಟೆಂಬರ್‌ 12ರಿಂದ ವಿಧಾನ ಮಂಡಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ವಿಧಾನ ಮಂಡಲದ ಅಧಿವೇಶನವು ಬೆಳಗಾವಿಯಲ್ಲಿ ಕಳೆದ ಮಾರ್ಚ್‍ನಲ್ಲಿ ನಡೆದಿತ್ತು.ಇದೀಗ ಬೆಂಗಳೂರು ನಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.

ಅಧಿವೇಶನದಲ್ಲಿ ಶೇ. 40 ಕಮಿಷನ್ ಆರೋಪ ಹಾಗೂ ಕೊಡಗಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.

error: Content is protected !!