ಸೆ.15 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

ಮಡಿಕೇರಿ ಸೆ.14:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಯುವ ದಿನಾಚರಣೆಯು ಕ್ರಿಯೆಯ ಮೂಲಕ ಭರವಸೆಯನ್ನು ಸೃಷ್ಟಿಸುವುದು ಎಂಬ ಘೋಷಣೆಯೊಂದಿಗೆ ಸೆಪ್ಟೆಂಬರ್, 15 ರಂದು ಬೆಳಗ್ಗೆ 11 ಗಂಟೆಗೆ ಸುಂಟಿಕೊಪ್ಪದ ಸಂತಮೇರಿ ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಸೋಮವಾರಪೇಟೆ ತಾ.ಸುಂಟಿಕೊಪ್ಪ ಸಂತ ಮೇರಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರಾದ ಆರ್.ಸೆಲ್ವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಎಸ್.ಗೋಪಿನಾಥ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್, ಸೋಮವಾರಪೇಟೆ ತಾ. ವೈದ್ಯಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್, ಸುಂಟಿಕೊಪ್ಪ ಪೊಲೀಸ್ ಠಾಣೆಯ ಆರಕ್ಷಕರ ಉಪ ನಿರೀಕ್ಷಕರಾದ ಎಚ್.ಡಿ.ಮಂಜು, ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಇತರರು ಪಾಲ್ಗೊಳ್ಳಲಿದ್ದಾರೆ.

error: Content is protected !!