ಸೆ.17 ರಂದು ಕಳತ್ಮಾಡು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಮಡಿಕೇರಿ ಸೆ.16:-‘ಜಿಲ್ಲಾಧಿಕಾರಿ ಅವರ ನಡೆ ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಸೆಪ್ಟೆಂಬರ್, 17 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಕಳತ್ಮಾಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.