fbpx

ಸೆ.19 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ಅಂತರ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟ

ಮಡಿಕೇರಿ ಸೆ.16:-ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಅಂತರ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ(2022-23)ವು ಸೆಪ್ಟೆಂಬರ್, 19 ರಿಂದ 21 ರವರೆಗೆ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್, 19 ರಂದು ಬೆಳಗ್ಗೆ 9.30 ಗಂಟೆಗೆ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಪೊಡನೋಳಂಡ ಎಸ್.ಸುಬ್ಬಯ್ಯ, ಚೇರಂಬಾಣೆ ಬೇಂಗೂರು ಗ್ರಾ.ಪಂ. ಅಧ್ಯಕ್ಷರಾದ ಯಶೋಧ ಪಿ.ಎಂ. ಉಪಾಧ್ಯಕ್ಷರಾದ ಟಿ.ಕೆ.ಸ್ವಾತಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.

error: Content is protected !!