ಸೆ.20 ಮತ್ತು 21 ರಂದು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ ಸೆ.16:-ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಸೆಪ್ಟೆಂಬರ್, 20 ಮತ್ತು 21 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಅಧ್ಯಕ್ಷರು ಸೆಪ್ಟೆಂಬರ್, 20 ರಂದು ಮಧ್ಯಾಹ್ನ 12 ಗಂಟೆಗೆ ಮಡಿಕೇರಿ ತಾಲ್ಲೂಕಿನ ಗೋಣಿಕೊಪ್ಪಲು, ಕರಿಕೆ, ಭಾಗಮಂಡಲ, ಶಿರಂಗಾಲ ಮುಂತಾದ ಗಡಿ ಗ್ರಾಮಗಳಿಗೆ/ ಗಡಿ ಶಾಲೆಗಳಿಗೆ/ ಮಡಿಕೇರಿ ಸಾಂಸ್ಕøತಿಕ ಸಮುಚ್ಚಯ ಭವನಕ್ಕೆ ಭೇಟಿ ಹಾಗೂ ಗಡಿ ಪ್ರಾಧಿಕಾರದ ಅನುದಾನಿತ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ.

ಸೆಪ್ಟೆಂಬರ್, 21 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಡಿ ಪ್ರಾಧಿಕಾರದ ಅನುದಾನದಿಂದ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಮತ್ತು ಹಣ ಬಳಕೆ ಪ್ರಮಾಣ ಪತ್ರಗಳ ಪರಿಶೀಲನೆ ಹಾಗೂ ಗಡಿ ಭಾಗದಲ್ಲಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಅವರು ತಿಳಿಸಿದ್ದಾರೆ.

error: Content is protected !!