ಸೆ.30 ರವರೆಗೆ ಕೋವಿಡ್ ಲಸಿಕಾ ಅಭಿಯಾನ

ಮಡಿಕೇರಿ ಸೆ.13:-ಭಾರತದ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ “ಅಜ್ಹಾದಿ ಕಾ ಅಮೃತ ಮಹೋತ್ಸವ”ದ ಪ್ರಯುಕ್ತ ಭಾರತ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಉಚಿತವಾಗಿ ಮುಂಜಾಗ್ರತಾ ಕೋವಿಡ್ ಲಸಿಕೆಯನ್ನು ನೀಡುವ ಕಾರ್ಯಕ್ರಮವನ್ನು ಸೆಪ್ಟೆಂಬರ್, 30 ರವರೆಗೆ ಹಮ್ಮಿಕೊಂಡಿದೆ.
ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳ ಲಸಿಕಾ ವಿಭಾಗದಲ್ಲಿ ಮುಂಜಾಗ್ರತಾ ಕೋವಿಡ್ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಎರಡನೇ ವರಸೆಯ ಕೋವಿಡ್ ಲಸಿಕೆಯನ್ನು ಪಡೆದು 6 ತಿಂಗಳು ಪೂರೈಸಿರುವ 18 ವರ್ಷ ಮೇಲ್ಪಟ್ಟ ಒಟ್ಟು 3,16,532 ಫಲಾನುಭವಿಗಳು ಮುಂಜಾಗೃತಾ ಕೋವಿಡ್ ಲಸಿಕಾಕರಣಕ್ಕೆ ಬಾಕಿ ಇದೆ.
ಈ ಎಲ್ಲಾ ಅರ್ಹ ಫಲಾನುಭವಿಗಳು ಸಮೀಪದ ಆರೋಗ್ಯ ಕೇಂದ್ರದಲ್ಲಿ ನಡೆಯುವ ಲಸಿಕಾ ಶಿಬಿರ ಹಾಗೂ ಪ್ರತೀ ಬುಧವಾರ ನಡೆಯುವ ಲಸಿಕಾ ಮೇಳದಲ್ಲಿ ಕೋವಿಡ್ ಲಸಿಕೆ ಪಡೆದು ಅಜ್ಹಾದಿ ಕಾ ಅಮೃತ ಮಹೋತ್ಸವ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ಯಶಸ್ವಿಗೊಳಿಸಲು ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋರಿದೆ.