ಸೆ. 4ರಂದು ಪತ್ರಿಕಾ ವಿತರಕರ ದಿನಾಚರಣೆ ಆಚರಿಸಲು ಪೂರ್ವಭಾವಿ ಸಭೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ), ಕೊಡಗು ಪತ್ರಿಕಾ ವಿತರಕರ ಹಾಗೂ ಏಜೆಂಟರ ಸಂಘ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯಕ್ತ ಆಶ್ರಯದಲ್ಲಿ ಸೆ.4ರಂದು ಮಡಿಕೇರಿ ಪತ್ರಿಕಾ ಭವನದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರ ದಿನಾಚರಣೆ ನಡೆಸಲು ತೀರ್ಮಾನಿಸಲಾಗಿದೆ.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರುಳೀಧರ್ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷ ಶಂಕರ್ ಕುದುರೆಮೋತಿ, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಸಮಾಜ ಸೇವಕ ನಾಪಂಡ ಮುತ್ತಪ್ಪ, ವಾರ್ತಾಧಿಕಾರಿ ಚಿನ್ನಸ್ವಾಮಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಎಸ್.ಎ. ಮುರುಳೀಧರ್ ವಹಿಸಲಿದ್ದಾರೆ.
ಕಾರ್ಯಕ್ರಮದಂದು ಕೊಡಗು ಜಿಲ್ಲೆಯ ಪತ್ರಿಕಾ

ವಿತರಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಕಾರ್ಯಕ್ರಮದ ಸಂಚಾಲಕರಾಗಿ ಟಿ.ಜಿ. ಸತೀಶ್, ಉಸ್ತುವಾರಿಯನ್ನು ಸುರೇಶ್ ಬಿಳಿಗೇರಿ ಅವರಿಗೆ ವಹಿಸಲಾಯಿತು.

ಸಭೆಯಲ್ಲಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಖಜಾಂಚಿ ಟಿ.ಕೆ. ಸಂತೋಷ್, ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ, ಕ್ಷೇಮಾಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್, ಸಂಘಟನಾ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ರಾಜ್ಯ ಸಮಿತಿ ಸದಸ್ಯ ಶಿವಪ್ರಸಾದ್ ಇದ್ದರು.

error: Content is protected !!