fbpx

ಸೇತುವೆ ಕುಸಿತ, ಹೆದ್ದಾರಿ ಸಂಪರ್ಕ ಸಂಪೂರ್ಣ ಕಡಿತ

ಮಡಿಕೇರಿ ತಾಲ್ಲೂಕಿನ ಸಂಪಾಜೆ ಬಳಿ ಮಳೆಯಿಂದಾಗಿ ಸೇತುವೆ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಡಿತಗೊಂಡಿದೆ. ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ವಾಹನ ಸಂಚಾರ ಏಕಮುಖವಾಗಿದೆ.

ಕಳೆದ ಕೆಲವು ದಿನಗಳಿಂದ ನಿರಂತರ ಭಾರಿ ಮಳೆ ಸುರಿಯುತ್ತಿದ್ದು ಸಂಪರ್ಕ ಕಡಿತದ ಆತಂಕ ಮೂಡಿಸಿದ್ದು, ಗಡಿ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ತಗೊಂಡಿದೆ.

ಪೆರಾಜೆ, ಕೊಯ್ನಾಡು ಭಾಗದಲ್ಲಿ ರಸ್ತೆಯಲ್ಲಿನ ಬಿರುಕು ಕಂಡು ಬಂದಿದೆ. ಚೆಂಬು ಗ್ರಾಮದಲ್ಲಿ ಸಂಪೂರ್ಣ ರಸ್ತೆ ಸಂಚಾರ ಕಡಿತಗೊಂಡಿದ್ದು, ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆಯಾಗಿದೆ.

error: Content is protected !!