fbpx

ಸೋಮವಾರಪೇಟೆಯಲ್ಲಿ ರೈತ ಸಂಘದಿಂದ ಪ್ರತಿಭಟನೆ

ಕಾಫಿ ಬೆಳೆಗಾರರ 10 ಹೆಚ್.ಪಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೋಮವಾರಪೇಟೆಯಲ್ಲಿ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿತು.

ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ಬೇಡಿಕೆಯನ್ನು ಬೆಳಗಾವಿ ಅಧಿವೇಶನದಲ್ಲಿ ಈಡೇರಿಸಲು ಒತ್ತಾಯಿಸಲಾಯಿತು.

ಜಿಲ್ಲೆಯ ರೈತರ,ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳು ವಿಫಲವಾಗಿದ್ದು, ಈ ಭಾರಿ ಅಧಿವೇಶನದಲ್ಲಿ ಪಟ್ಟು ಹಿಡಿದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಲಾಯಿತು.

error: Content is protected !!