fbpx

ಸ್ಥಳೀಯ ಚುನಾವಣೆ ಸ್ಥಗಿತ

ಕೊಡಗು: ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲೆಯ ಪಟ್ಟಣ ಪಂಚಾಯ್ತಿ ಚುನಾವಣೆಗೆ ಹೈಕೋರ್ಟ್ ತಣ್ಣೀರು ಎರಚಿದೆ. ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಯಲ್ಲಿನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದು ಎರಡು ವರ್ಷಗಳೇ ನಡೆದಿದ್ದು ಸರ್ಕಾರ ನಿಗದಿಪಡಿಸಿದ್ದ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ವಿರೋಧಿಸಿದ್ದ ಹಿನ್ನಲೆಯಲ್ಲಿ ಜಿಲ್ಲೆಯ ಹಿರಿಯ ವಕೀಲರಾದ ಹೆಚ್.ಎಸ್ ಚಂದ್ರಮೌಳಿ ಮತ್ತು ಎ.ಎಸ್ ಪೊನ್ನಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದ್ದು, ಬಿಜೆಪಿಗೆ ಮುಖಭಂಗ ಉಂಟು ಮಾಡಿದೆ.ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ರಿಟ್ ಅರ್ಜಿ ಬಂದಿದ್ದ ಹಿನ್ನಲೆಯಲ್ಲಿ ಚುನಾವಣೆ ನಡೆಯುವ ರಾಜ್ಯದ ಪಟ್ಟಣ ಪಂಚಾಯ್ತಿಗಳಿಗೆ ಅನ್ವಯವಾಗಲಿದೆ.

error: Content is protected !!