ಸ್ಮಶಾನ ಜಾಗ ಹಸ್ತಾಂತರ

ಮಡಿಕೇರಿ ಸೆ.07:-ಜಿಲ್ಲಾಧಿಕಾರಿ ಅವರ ಆದೇಶದಂತೆ ವಿರಾಜಪೇಟೆ ಹೋಬಳಿ, ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಳ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನಕ್ಕಾಗಿ ಕಾಯ್ದಿರಿಸಲಾದ ಜಾಗವನ್ನು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಗೆ, ಈ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಮತ್ತು ಸದಸ್ಯರ, ಸಾರ್ವಜನಿಕರ ಸಮ್ಮುಖದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು.