ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಮಡಿಕೇರಿ ಆ:-ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್ಲೈನ್ ಮೂಲಕ kacdc.karnataka.gov.in ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 11 ಕೊನೆಯ ದಿನವಾಗಿದೆ. ಮಹಿಳೆಯರಿಗೆ ಶೇ.33 ಹಾಗೂ ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 9448451111 (ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದು) ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.