fbpx

ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ನಡೆಯಲಿರುವ ಆಯುಧ ಪೂಜೆ, ವಿಜಯದಶಮಿ, ದಸರಾ ಕಾರ್ಯಕ್ರಮದ ಸಂಬಂಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವೂ ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ 1965ರ ಕಲಂ 21ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ಅಕ್ಟೋಬರ್ 14 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 16 ರ ಬೆಳಗ್ಗೆ 6 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ 10 ಕಿ.ಮೀ ವ್ಯಾಪ್ತಿಯೊಳಗೆ ಮತ್ತು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಸರಹದ್ದಿನ 10 ಕಿ.ಮೀ. ವ್ಯಾಪ್ತಿಯೊಳಗೆ ಬರುವ ಎಲ್ಲಾ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಸಂಬಂಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರ ಚಲಾಯಿಸಿ ಅಕ್ಟೋಬರ್ 16 ರ ಬೆಳಿಗ್ಗೆ 6 ಗಂಟೆಯಿಂದ 18 ರ ಬೆಳಗ್ಗೆ 6 ಗಂಟೆಯವರೆಗೆ ಭಾಗಮಂಡಲ ಠಾಣಾ ಸರಹದ್ದಿನ ಸುಮಾರು 20 ಕಿ.ಮೀ. ವ್ಯಾಪ್ತಿಯಲ್ಲಿ (ಭಾಗಮಂಡಲ ಮತ್ತು ಚೇರಂಬಾಣೆ ಸೇರಿದಂತೆ) ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.

error: Content is protected !!