ಹಾರಂಗಿ ಅಚ್ಚುಕಟ್ಟು ಪುನಶ್ಚೇತನ ಮತ್ತು ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ

ಹಾರಂಗಿ ಅಚ್ಚುಕಟ್ಟು ಪುನಶ್ಚೇತನ ಮತ್ತು ಅಭಿವೃದ್ದಿ ಸಂಬಂಧ 130 ಕೋಟಿ ವೆಚ್ಚದ ಕಾಮಗಾರಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಕಾವೇರಿ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಹಾರಂಗಿ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿನ ಪ್ರದೇಶ ಭೇಟಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು 2018ರ ಭಾರೀ ಮಳೆಗೆ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭೂಕುಸಿತ ಹಿನ್ನೆಲೆಯಿಂದ ಉಂಟಾದ ಹೂಳು ಸಂಗ್ರಹವಾಗಿದೆ ಎಂದರು. ಯೋಜನೆಗೆ 130 ಕೋಟಿ ಅಂದಾಜಿಸಲಾಗಿದ್ದು, 40 ಕೋಟಿಯಲ್ಲಿ ಹೂಳು, 314 ಕೋಟಿ ಗೇಬಿನ್ ವಾಲ್ ನಿರ್ಮಾಣ ಮಾಡಲಾಗುವುದು ಎಂದರು.

error: Content is protected !!