fbpx

‘ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಖಡಕ್ ಕ್ರಮ ತೆಗೆದುಕೊಳ್ಳಬೇಕು: ಹಿಂದೂ ಯುವ ವಾಹಿನಿ

ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದು ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.

ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರುಗಳ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ಗಳಿಂದ ಏನೂ ಪ್ರಯೋಜನವಿಲ್ಲ.

ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದು ರಾಜ್ಯ ಹಿಂದು ಯುವ ವಾಹಿನಿ ಉಪಾಧ್ಯಕ್ಷ ಹಾಗು ವರಿಷ್ಠರಾದ ಕುಲ್ದೀಪ್ ಪೂಣಚ್ಚ ಅವರು ರಾಜ್ಯ ಸರಕಾರಕ್ಕೆ ತಮ್ಮ ಒತ್ತಾಯ ಮಾಡಿದ್ದಾರೆ.

error: Content is protected !!