fbpx

ಹುಲಿ ದಾಳಿಗೆ ವ್ಯಕ್ತಿ ಬಲಿ ಪ್ರಕರಣ:ರೈತರಿಂದ ಅಹೋರಾತ್ರಿ ಪ್ರತಿಭಟನೆ

ವಿರಾಜಪೇಟೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದ ಹುಲಿ ದಾಳಿಗೆ ಕಾರ್ಮಿಕ ಗಣೇಶ್ (28) ಬಲಿಯಾದ ಪ್ರಕರಣ ಸಂಬಂಧಿಸಿದಂತೆ ಗ್ರಾಮಸ್ಥರು, ರೈತ ಸಂಘದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರುವಂತೆ ಒತ್ತಾಯಿಸಿ, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿರಾಜಪೇಟೆ ಭಾಗದಲ್ಲಿ ನಿರಂತರ ಹುಲಿ ದಾಳಿಯಾಗುತ್ತಿದ್ದರೂ, ವಿರಾಜಪೇಟೆಯ ಅರಣ್ಯ ಅಧಿಕಾರಿ ಚಕ್ರಪಾಣಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿಯೇ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಕೊಡಗು ಎಸ್ಪಿ ಅಯ್ಯಪ್ಪ ಭೇಟಿ ನೀಡಿದ ಸಂದರ್ಭ
ಅರಣ್ಯಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

error: Content is protected !!