fbpx

05 ರಂದು ಡಾ.ಬಾಬು ಜಗಜೀವನ್ ರಾಂ ಅವರ 115 ನೇ ಜನ್ಮ ದಿನಾಚರಣೆ

ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ರವರ 115ನೇ ಜನ್ಮ ದಿನಾಚರಣೆಯು ಏಪ್ರಿಲ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿರುವ ತಾಲ್ಲೂಕು ಪಂಚಾಯಿತಿಯ ಎಸ್‍ಜೆಎಸ್‍ವೈ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ರವಿಕುಶಾಲಪ್ಪ, ಸಂಸದರಾದ ಪ್ರತಾಪ್‍ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಸ್.ಲ್.ಬೋಜೇಗೌಡ, ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ವಿರಾಜಪೇಟೆ ಸರ್ವೋದಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎಚ್.ಆರ್.ಗಿರೀಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.

error: Content is protected !!