2023ಕ್ಕೆ ಅಧಿಕಾರಕ್ಕೆ ಬಂದು ಮತಾಂತರ ಕಾಯ್ದೆ ವಾಪಸ್ ಪಡೆಯುತ್ತೇವೆ

ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿದ್ದರು ಅದನ್ನು ಮರೆಮಾಚಲು ಮತಾಂತರ ಕಾಯ್ದೆ ಜಾರಿಗೆ ತರಲು ಸರ್ಕಾರ ಹೊರಟಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕಾಯ್ದೆ ವಾಪಸ್ ಪಡೆಯಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಗರದ ಮೆಥೋಡಿಸ್ಟ್ ಚರ್ಚ್ನಲ್ಲಿ ಮತಾಂತರ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಇವರು. ಈ ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ ಸಮಸ್ಯೆ ಉಂಟುಮಾಡಲು ಇಂತಹ ಕೆಲಸ ಮಾಡ್ತಿದ್ದಾರೆ. ನಾವು ಅಧಿಕಾರದಲ್ಲಿ ಇರಲಿ ಬಿಡಲಿ ಮತಾಂತರ ಕಾಯ್ದೆ ವಿರೋಧ ಮಾಡುತ್ತೇವೆ. ಬಿಜೆಪಿ ಸರ್ಕಾರ ಮತಾಂತರ ಕಾಯ್ದೆ ಜಾರಿಗೆ ತರುವ ದುಸ್ಸಾಹಸಕ್ಕೆ ಕೈ ಹಾಕಬಾರದು. ಒಂದುವೇಳೆ ಈ ಪ್ರಯತ್ನಕ್ಕೆ ಕೈ ಹಾಕಿದ್ದೇ ಆದರೆ ಬರುವ 2013 ಕ್ಕೆ ಅಧಿಕಾರಕ್ಕೆ ಬಂದು ಈ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದರು.

ಸಾಮಾಜಿಕ ಆರ್ಥಿಕ ಅಸಮಾನತೆ ಹೋಗಲಾಡಿಸಲು ಸರ್ಕಾರ ಕೆಲಸ ಮಾಡಬೇಕು. ಅದನ್ನು ಬಿಟ್ಟು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಬಾರದು. ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ಕಾಯ್ದೆ ತರುತ್ತಿದೆ. ಬಿಜೆಪಿ ಪಕ್ಷ ಏನೂ ಕೆಲಸ ಮಾಡಿಲ್ಲ. ನರೇಂದ್ರ ಮೋದಿ ಬಂದು ದೇಶವನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿದರು.