fbpx

21ರಂದು ಹರಿದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 153ನೇ ಜನ್ಮ ದಿನಾಚರಣೆ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನಾಪೋಕ್ಲು ಕೊಡವ ಸಮಾಜ ಸಹಯೋಗದಲ್ಲಿ ಸೆಪ್ಟೆಂಬರ್, 21 ರಂದು ಬೆಳಗ್ಗೆ 10 ಗಂಟೆಗೆ ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 153 ನೇ ‘ಪುಟ್ಟ್‍ನ ನಮ್ಮೆ’ ಕಾರ್ಯಕ್ರಮ ನಡೆಯಲಿದೆ. 

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಅಪ್ಪಚ್ಚೆಟ್ಟೋಳಂಡ ಮನುಮುತ್ತಪ್ಪ ಅವರು ಭಾಗವಹಿಸಲಿದ್ದಾರೆ. ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು ವಿಚಾರ ಮಂಡಿಸಲಿದ್ದಾರೆ. 

ಚೆಕ್ಕೇರ ಪಂಚಮ್ ತ್ಯಾಗರಾಜ್ ಮತ್ತು ತಂಡದವರಿಂದ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಯ ಹಾಡು ಹಾಡಲಿದ್ದಾರೆ. ಅಕಾಡೆಮಿ ಪ್ರಕಟಿಸಿರುವ ಪುಸ್ತಕ ಮತ್ತು ಸಿ.ಡಿ. ಪ್ರದರ್ಶನ ಮತ್ತು ಮಾರಾಟ ಇರುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.

error: Content is protected !!