300 ವಿದ್ಯಾರ್ಥಿಗಳಿಗೆ ಲಸಿಕೆ

ಕುಶಾಲನಗರದ ಕಲಾಭವನದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಜಿಲ್ಲಾ ಆರೋಗ್ಯ ಇಲಾಖೆ ಕುಟುಂಬ ಕಲ್ಯಾಣ ಇಲಾಖೆ,ತಾಲ್ಲೂಕು ಆರೋಗ್ಯ ಅಧಿಕಾರಿ ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ಇವರ ಆಶ್ರಯದಲ್ಲಿ ಫಾತೀಮ ಹಿರಿಯ ಪ್ರಾಥಮಿಕ ಶಾಲೆಯ 300 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.
12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಫಾತೀಮ ಶಾಲೆಯ ವಿದ್ಯಾರ್ಥಿಗಳು ಪೋಷಕರ ಜೊತೆ ಆಗಮಿಸಿ ಲಸಿಕೆ ಪಡೆದರು. ಈ ಲಸಿಕೆ ಪಡೆಯುವುದರಿಂದ ಯಾವುದೇ ಆತಂಕ ಬೇಡ,ಅಡ್ಡ ಪರಿಣಾಮ ಇರುವುದಿಲ್ಲ ಎಂದು ಕುಶಾಲನಗರ ತಾಲ್ಲೂಕು ಆರೋಗ್ಯ ಶಿಕ್ಷಣ ಇಲಾಖೆಯ ಅಧಿಕಾರಿ ಶಾಂತಿ ತಿಳಿಸಿದ್ದಾರೆ.