fbpx

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಂದು ನಸುಕಿನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಮನೆಯ ಮೇಲೆ ನಡೆದಿರುವ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗಳನ್ನು ಪತ್ತೆ ಮಾಡಿರುವುದಾಗಿ ಮೂಲಗಳು ಹೇಳಿವೆ.

ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ಹಣವನ್ನು ಸೀಜ್ ಮಾಡಲಾಗಿದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಕರ್ನಾಟಕದ 9 ಕಡೆ, ದೆಹಲಿಯ 4 ಕಡೆ ಹಾಗೂ ಮುಂಬೈನ 1 ಕಡೆ ಇಂದು ಸಿಬಿಐ ದಾಳಿ ನಡೆದಿದ್ದು, ದಾಖಲೆಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಡಿ.ಕೆ. ಶಿವಕುಮಾರ್ ಮನೆ ಜತೆಗೆ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ.

error: Content is protected !!