fbpx

ಮಾದಕ ವಸ್ತು ಮಾರಾಟ:ಟ್ಯಾಟೂ ಕಲಾವಿದ ಸೇರಿ ಮತ್ತೋರ್ವ ಬಂಧನ

ಕೊಡಗು:ಜಿಲ್ಲೆಯಲ್ಲಿ ನಶೆಯೇರುವ ಮಾತ್ರೆಗಳನ್ನು ಮೆಡಿಕಲ್ ಶಾಪ್ ಮಾಲೀಕರ ಶಾಮೀಲಿನೊಂದಿಗೆ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ದಂದಿಗಳು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ , ಡ್ರಗ್ಸ್ ಮತ್ತಿತರ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ನಿಯಂತ್ರಣಕ್ಕೆ ಬಂದ ಹಿನ್ನಲೆಯಲ್ಲಿ ಮಾದಕ ವ್ಯಸನಿಗಳಾಗಿದ್ದ ಯುವಕರು ನಶೆಯೆರುವ ಮಾತ್ರೆಗಳನ್ನು ಮೆಡಿಕಲ್ ಶಾಪ್ ಗಳಿಂದ ಖರೀದಿಸಿ ಬಳಕೆ ಮಾಡುತ್ತಿರುವುದಲ್ಲದೇ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನಲೆ ಕೊಡಗು ಜಿಲ್ಲೆ ಡಿಸಿಐಬಿ ಘಟಕದ ಪೊಲೀಸರು ಸಿಕ್ಕಿದ ಖಚಿತ ಮಾಹಿತಿ ಪಡೆದು ಗೋಣಿಕೊಪ್ಪಲಿನ ಮೆಡಿಕಲ್ ಶಾಪ್ ವೊಂದರಿಂದ ನಶೆಯೆರುವ ಮಾತ್ರೆಗಳನ್ನು ಖರೀದಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಗೋಣಿಕೊಪ್ಪದ ಟ್ಯಾಟೂ ಕಲಾವಿದ ಸುಮನ್ ಮತ್ತೊಬ್ಬ ವಿದ್ಯಾರ್ಥಿ ಚೇತನ್ ನನ್ನು ಬಂಧಿಸಿದ್ದು ಇವರ ಬಳಿಯಿದ್ದ ನಶೆಯೆರುವ ಮಾತ್ರೆಗಳ ಬಾಕ್ಸ್ ಸಮೇತ ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿರುವ ಕೆಲ ಮೆಡಿಕಲ್ ಶಾಪ್ ನ ಮಾಲೀಕರು ನಶೆಯೆರುವ ಮಾತ್ರೆಗಳನ್ನು ಗೌಪ್ಯವಾಗಿ ಮಾದಕ ವ್ಯಸನಿಗಳಾಗಿರುವ ಕೆಲ ಯುವಕರ ಮುಖಾಂತರ ಮಾರಾಟ ಮಾಡಿಸಿ ಲಾಭ ಪಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ. ವಶಕ್ಕೆ ಪಡೆದ ಯುವಕರಿಬ್ಬರನ್ನು ವಶಕ್ಕೆ ಪಡೆದುಕೊಂಡ ಮಾತ್ರೆಗಳೊಂದಿಗೆ ಜಿಲ್ಲಾ ಡ್ರಗ್ ಕಂಟ್ರೋಲರ್ ಅಧಿಕಾರಿಯವರ ಮುಂದೆ ಹಾಜರುಪಡಿಸಲಾಗಿದ್ದು ಯುವಕರಿಬ್ಬರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗಿದೆ.

error: Content is protected !!