ಮತ್ತೆ ಕಾಂಗ್ರೆಸ್ ವಶಕ್ಕೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಆಡಳಿತ

ಸಿದ್ದಾಪುರ :ಕಳೆದ ಹಲವು ವರ್ಷಗಳಿಂದಲೂ ಕಾಂಗ್ರೆಸ್ ಆಡಳಿತದಲ್ಲಿರುವ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಹದಿನೈದು ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ
7ವಾರ್ಡ್ ನ ಒಟ್ಟು 20 ಸ್ಥಾನಗಳಿಗೆ 59 ಮಂದಿ ಸ್ಪರ್ಧಿಸಿದ್ದರು.
ಕಾಂಗ್ರೆಸ್ ಬೆಂಬಲಿತ 20 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು
ವಿವಿಧ ವಾರ್ಡ್ ಗಳಲ್ಲಿ 15 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಗ್ರಾಮ ಪಂಚಾಯಿತಿ ಆಡಳಿತ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ .
ಬಿಜೆಪಿ ಬೆಂಬಲಿತರಾಗಿ ಇಪ್ಪತ್ತು ಮಂದಿ ಸ್ಪರ್ಧಾಕಣದಲ್ಲಿದ್ದು 4ಮಂದಿ ಜಯಗಳಿಸಿದ್ದಾರೆ.
ಸಿಪಿಐಎಂ ಬೆಂಬಲಿತರಾಗಿ 2ಅಭ್ಯರ್ಥಿಗಳು ಸೋಲು ಕಂಡಿದ್ದು. ಎಸ್ ಡಿಪಿಐ ಪಕ್ಷದ ಅಭ್ಯರ್ಥಿಗಳಾಗಿ ಇಬ್ಬರ ಪೈಕಿ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಗೆಲುವು ನೆಲ್ಯಹುದಿಕೇರಿಯಲ್ಲಿ ವಿಜಯೋತ್ಸವ

15 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಪಟ್ಟಣದಲ್ಲಿ ವಿಜಯೋತ್ಸವ ನಡೆಸುವ ಮೂಲಕ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಾಂಗ್ರೆಸ್ ಭದ್ರಕೋಟೆಯಾಗಿರುವ ನೆಲ್ಯಹುದಿಕೇರಿಯಲ್ಲಿ ಮತ್ತೆ ಹದಿನೈದು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮತದಾರರು ಹೆಚ್ಚು ಒಲವು ತೋರಿದ್ದಾರೆ ಎಂದು ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗಿಸ್ ಪತ್ರಿಕೆ ಗೆ ತಿಳಿಸಿದ್ದಾರೆ

error: Content is protected !!