fbpx

500 ಎಲ್‍ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನ ಘಟಕ ಉದ್ಘಾಟನೆ

ಮಡಿಕೇರಿ:-ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಾಲೇಜಿನಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಹಯೋಗದೊಂದಿಗೆ ಪೆಟ್ರೋನೆಟ್ ಎಲ್‍ಎನ್‍ಜಿ ಲಿಮಿಟೆಡ್ ಸಂಸ್ಥೆ ಅವರು ಸಿಎಸ್‍ಆರ್ ಯೋಜನೆಯಡಿಯಲ್ಲಿ ಸ್ಥಾಪಿಸಲಾಗಿರುವ 500 ಎಲ್‍ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನ ಘಟಕವನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ.ಜಯಲಕ್ಷ್ಮಿ ಪಾಟ್ಕರ್ ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಲೋಕಾರ್ಪಣೆಗೊಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಖಾಂಡ್ ರಾಜ್ಯದ ಏಮ್ಸ್ ವೈದ್ಯಕೀಯ ಕಾಲೇಜಿನ ಮೂಲಕ ದೇಶದಾಧ್ಯಂತ ಪಿಎಂ ಕೇರ್ ಹಾಗೂ ಸಿಎಸ್‍ಆರ್ ಯೋಜನೆ ಮೂಲಕ ಸ್ಥಾಪಿಸಲಾಗಿರುವ ಆಮ್ಲಜನಕ ಉತ್ಪಾದನ ಘಟಕವನ್ನು ಲೋಕಾರ್ಪಣೆಗೊಳಿಸಿ ಕೋವಿಡ್ ಸಂದರ್ಭದಲ್ಲಿ ದೇಶದಾದ್ಯಂತ ಆರೋಗ್ಯ ಕ್ಷೇತ್ರದಲ್ಲಿ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು.
ಸಂಸ್ಥೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಆದ ಡಾ.ಕೆ.ಬಿ.ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿಗಳಾದ ಡಾ.ನಂಜುಂಡೇಗೌಡ, ವೈದ್ಯಕೀಯ ಅಧೀಕ್ಷಕರಾದ ಡಾ.ಎಸ್. ಮಂಜುನಾಥ್, ವಿಭಾಗದ ಮುಖ್ಯಸ್ಥರುಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರ್ ವಿಭಾಗದ ಸಹಾಯಕ ಅಭಿಯಂತರರುಗಳಾದ ರಾಜೇಶ್, ಪೆಟ್ರೋನೆಟ್ ಎಲ್‍ಎನ್‍ಜಿ ಲಿಮಿಟೆಡ್ ಸಂಸ್ಥೆಯ ಪರವಾಗಿ ಆತೀಶ್ ಗುಪ್ತ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಮತ್ತು ಬೋದಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣವನ್ನು ನೇರ ಪ್ರಸಾರದ ಮೂಲಕ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಲಾಗಿತ್ತು.

error: Content is protected !!