fbpx

ಭಾರತದ ಸೋಲಿನಿಂದ ಹೃದಯಾಘಾತವಾಗಿ ಅಭಿಮಾನಿ ಸಾವು!

ನಿನ್ನೆ ನಡೆದ ಇಂಡೋ ಪಾಕ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ಸೋಲಿನಿಂದ ಆಘಾತಗೊಂಡು ಹೃದಯಾಘಾತದಿಂದ ಅಭಿಮಾನಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತರು ಎಂದು ತಿಳಿದು ಬಂದಿದೆ. ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸಾವು ಸಂಭವಿಸಿತು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿಯೇ ಸಾವು ಸಂಭವಿಸಿದೆ.

error: Content is protected !!