fbpx

ಮಡಿಕೇರಿ ಏ.12 : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಮಾಲು ಸಹಿತ ಬಂಧಿಸಿದೆ.

ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಜೀವಂತ ಒಂದು ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ನಟೇಶ್ ಹಾಗೂ ತುಹಾದೇವ ಪ್ರಸಾದ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆಮೆಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಬಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸೆಬಲ್ ಗಳಾದ ಹೆಚ್.ಎಸ್.ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಕಾನ್ಸೆಬಲ್‌ಗಳಾದ ಸ್ವಾಮಿ ಹಾಗೂ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!