ಅದ್ದೂರಿಯಾಗಿ ಸರಸ್ವತಿ ಪೂಜೆ ಮತ್ತು ಆಯುಧ ಪೂಜೆ
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಅದ್ದೂರಿಯಾಗಿ ಸರಸ್ವತಿ ಪೂಜೆ ಮತ್ತು ಆಯುಧ ಪೂಜೆಯು ನೆರವೇರಿತು.
ಪೂಜಾ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ. ಕಾರ್ಯಪ್ಪ ಕೆ.ಬಿ, ಪ್ರಾಂಶುಪಾಲರಾದ ಡಾ ವಿಶಾಲ್ ಕುಮಾರ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಂಜುಳ ಎ.ಕೆ ಹಾಗೂ ಸಹ ಪ್ರಾಧ್ಯಾಪಕರಾದ ಗುರುಪಾದ ಕೆ.ಪಿ ಮತ್ತು ಎಲ್ಲಾ ವಿಭಾಗದ ಬೋಧಕ/ಬೋಧಕೇತರ ಸಿಬ್ಬಂದಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ನೆರೆದಿದ್ದರು.