ಆಹಾರ ಕಿಟ್ ವಿತರಣೆ
ಮಡಿಕೇರಿ ಅ.10:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕ್ಷಯ ರೋಗಿಗಳಿಗೆ ನಗರದ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕಿಟ್ ವಿತರಿಸಿದರು.