fbpx

ಉಚಿತವಾದರೂ ಮೂರನೇ ಡೋಸ್ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿಲ್ಲ ಜನ: ಸಚಿವ ಸುಧಾಕರ್

 ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಉಚಿತವಾಗಿ ನೀಡುತ್ತಿದ್ದರೂ ಜನ ಪಡೆದುಕೊಳ್ಳುತ್ತಿಲ್ಲ. ಮೂರನೇ ಡೋಸ್ ಪಡೆದವರು ಶೇಕಡ 17ರಷ್ಟು ಜನ ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಜನ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಸಚಿವರು, ಲಸಿಕೆ ಪಡೆದರೆ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದರೂ ಸಾವು ಸಂಭವಿಸುವ ಸ್ಥಿತಿ ಸೃಷ್ಟಿಯಾಗಲ್ಲ. ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಮೊದಲ ಮತ್ತು ಎರಡನೇ ಡೋಸ್ ಲಸಿಕಾಕರಣ ಶೇಕಡ 100 ರಷ್ಟು ಆಗಿದೆ. ಆದರೆ, ಮೂರನೇ ಡೋಸ್ ಶೇಕಡ 17ರಷ್ಟು ಮಾತ್ರ ಆಗಿದೆ. ಪ್ರಧಾನಿ ಮೋದಿ ಉಚಿತವಾಗಿ ಲಸಿಕೆ ನೀಡಲು ಕ್ರಮ ಕೈಗೊಂಡಿದ್ದಾರೆ. ಲಕ್ಷಾಂತರ ಡೋಸ್ ಲಸಿಕೆ ಲಭ್ಯವಿದ್ದರೂ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ. ಜನರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರಿಂದ ಮೂರನೇ ಡೋಸ್ ನೀಡಲಾಗುತ್ತಿದೆ. ಲಸಿಕೆ ಪಡೆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತದೆ. ಎಲ್ಲಾ ಅರ್ಹರು ಲಸಿಕೆ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

error: Content is protected !!
satta king chart