ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸಹ ಸದಸ್ಯರ ನೇಮಕ..
ಮಡಿಕೇರಿ ಸೆ.02(ಕ. ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಗೆ 3 ಜನ ಸಹ ಸದಸ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 1 ರಂದು ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಸರ್ವ ಸದಸ್ಯರ ಸಭೆಯಲ್ಲಿ ಮಂಗಳೂರಿನ ಪಾಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ್ ಕೆ.ವಿ, ಮಂಗಳೂರಿನ ಬ್ಯಾಂಕ್ ಆಫ್ ಬರೋಡ ಉದ್ಯೋಗಿ ಅಲಸಂಡೆಮಜಲು ಮನೆಯ ಭರತೇಶ್ ಎ.ಬಿ ಮತ್ತು ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಮತ್ತು ಅಂಚೆಯ ಕುಂಬಳಚೇರಿ ಮನೆಯ ಕಿರಣ್ ಕುಂಬಳಚೇರಿ ಅವರನ್ನು ಸರ್ವಾನುಮತದಿಂದ ಸಹ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ಅವರು ತಿಳಿಸಿದ್ದಾರೆ.