fbpx

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ ಜು.20:-ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 3.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 25.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1826.92 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1321 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.25 ಮಿ.ಮೀ. ಕಳೆದ ವರ್ಷ ಇದೇ ದಿನ 26.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2543.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1900.14 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.53 ಮಿ.ಮೀ. ಕಳೆದ ವರ್ಷ ಇದೇ ದಿನ 22.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1451.06 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1086.27 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1486.27 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 976.60 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 1.20, ನಾಪೆÇೀಕ್ಲು 2, ಸಂಪಾಜೆ 13, ಭಾಗಮಂಡಲ 8.80, ವಿರಾಜಪೇಟೆ ಕಸಬಾ 19.20, ಅಮ್ಮತಿ 8, ಸೋಮವಾರಪೇಟೆ ಕಸಬಾ 0.80, ಶಾಂತಳ್ಳಿ 1 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.12 ಅಡಿಗಳು. ಕಳೆದ ವರ್ಷ ಇದೇ ದಿನ 2855.93 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ., ಕಳೆದ ವರ್ಷ ಇದೇ ದಿನ 10.60 ಮಿ.ಮೀ., ಇಂದಿನ ನೀರಿನ ಒಳಹರಿವು 6,111 ಕ್ಯುಸೆಕ್, ಕಳೆದ ವರ್ಷ ಇದೇ ದಿನ 9393 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 4500 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 6,783 ಕ್ಯುಸೆಕ್. ನಾಲೆಗೆ 150 ಕ್ಯುಸೆಕ್.

error: Content is protected !!
satta king chart