fbpx

ಜಿಲ್ಲಾಧಿಕಾರಿಯಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಮಡಿಕೇರಿ ಮೇ.21 : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಮೇ 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದ ಕಕ್ಕಬ್ಬೆ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಮೇ, 25 ರೊಳಗೆ ತಮ್ಮ ಅಹವಾಲುಗಳ ಅರ್ಜಿಯನ್ನು ಸಂಬಂಧಪಟ್ಟ ನಾಡಕಚೇರಿ, ತಾಲ್ಲೂಕು ಕಚೇರಿಗೆ ಸಲ್ಲಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಕೋರಿದ್ದಾರೆ.

error: Content is protected !!