May 4, 2021

ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ಮೇ 4 ಇಂದಿನಿಂದ 7 ರ ತನಕ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗುವ ಸಂಭವ ಹೆಚ್ಚಾಗಿದ್ದು, ಮೇ 5 ಮತ್ತು 6 ರಂದು ಯೆಲ್ಲೋ ಅಲರ್ಟ್ಅನ್ನು ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಜಿಲ್ಲೆಯಲ್ಲಿ ರಾತ್ರಿ ಹಗಲೆನ್ನದೆ ಏಕಾಏಕಿ ಮಳೆ ಸುರಿಯಲಾರಂಭಿಸಿದ್ದು, ಮೇ ಮೊದಲ ವಾರದರಲ್ಲೇ ಮುಂಗಾರುವಿನ ಮುನ್ಸೂಚನೆ ನೀಡಿದೆ. ಮಳೆಯಿಂದ ಮರಗಳು ಧರೆಗುರುಳುತ್ತಿವೆ. ಮೂರ್ನಾಡು – ನಾಪೋಕ್ಲು ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಚಾರ ಕಡಿತಗೊಂಡಿದ್ದು,ಅಲ್ಲಲ್ಲಿ ಸಣ್ಣಪುಟ್ಟ ಘಟನೆಗಳು ನಡೆಯುತ್ತಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

error: Content is protected !!