fbpx

ಬರ್ಬರ ಅಪಘಾತದಲ್ಲಿ ಆರು ಮಂದಿ ದಾರುಣ ಸಾವು!

ಮಡಿಕೇರಿ ಏ.20 : ವಿವಾಹ ಸಮಾರಂಭ ಮುಗಿಸಿ ಮರಳುತ್ತಿದ್ದ ಬೊಲೇರೋ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಣುಸೂರು ತಾಲ್ಲೂಕಿನ ಹರೀನಹಳ್ಳಿಗೇಟ್ ಎಂಬಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಪಾಲಿಬೆಟ್ಟ ಮೂಲದ 6 ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹುಣುಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಬೊಲೇರೋ ನಜ್ಜುಗುಜ್ಜಾಗಿದೆ.

ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು. ಹುಣುಸೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!