fbpx

ಮನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಮಡಿಕೇರಿ ಅ.14:-ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ ಹಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಣಿಗೊಂಡ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆಯು ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಐಶ್ವರ್ಯ ಚಾರಿಟೆಬಲ್  ಟ್ರಸ್ಟ್ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ವತಿಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶರೀನ್ ಮುತ್ತಣ್ಣ ಅವರು ಮಾತನಾಡಿ ಗಿರಿಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮನರೇಗಾ ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ  ತಪಾಸಣೆ ಕೈಗೊಳ್ಳಲಾಗಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.    

ದುಡಿಮೆ ಪದ್ಧತಿ ಮತ್ತು ವ್ಯವಸಾಯ ಪದ್ಧತಿಯು ಸಂಪೂರ್ಣ ಬದಲಾಗಿದ್ದು, ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿದೆ. ಅದ್ದರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹೆಚ್ಚು ಪಾಲ್ಗೊಂಡು ಆರೋಗ್ಯ ಸಮಸ್ಯೆಗಳನ್ನು ವೈದ್ಯರ ಬಳಿ ಮುಕ್ತವಾಗಿ ಮಾತನಾಡಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ವೈದ್ಯರಾದ ಡಾ.ಅಶೋಕ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಅನೇಕ ಖಾಯಿಲೆಗಳು ಕಂಡುಬರುತ್ತಿದ್ದು, ಉಚಿತ ಆರೋಗ್ಯ ಶಿಬಿರದಲ್ಲಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಇದ್ದರೆ, ಅದನ್ನು ಗುರುತಿಸಿ ಹೆಚ್ಚಿನ ಚಿಕಿತ್ಸೆ ನೀಡಲಾವುದು ಎಂದು ತಿಳಿಸಿದರು.
ಉಚಿತ ಆರೋಗ್ಯ ಶಿಬಿರದಲ್ಲಿ ಪ್ರಮುಖವಾಗಿ ರಕ್ತ ಪರೀಕ್ಷೆಗಳನ್ನು ಕೈಗೊಂಡು ಮಧುಮೇಹ, ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದಂತೆ, ಕಣ್ಣಿನ ಸಮಸ್ಯೆಗಳು, ಕಿವಿಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಯಿತು. ಉಚಿತ ಆರೋಗ್ಯ  ತಪಾಸಣೆ ಶಿಬಿರದಲ್ಲಿ ಮನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಕುಟುಂಬಗಳು ಪಾಲ್ಗೊಂಡು ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಂಡರು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶರೀನ್ ಮುತ್ತಣ್ಣ, ಉಪಾಧ್ಯಕ್ಷರಾದ ಕವಿತಾ ಪ್ರಭು, ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಚಕ್ಕೇರಾ ಸೂರಿ ಅಯ್ಯಪ್ಪ, ಸದಸ್ಯರುಗಳಾದ ಆರ್.ಪವಿತಾ, ಪಿ.ಅಮ್ಮಣ್ಣಿ, ಹಾಡಿ ಅಧ್ಯಕ್ಷರಾದ ದಾಸಪ್ಪ,  ವೈದ್ಯರಾದ ಡಾ.ಅಶೋಕ್, ಶಾಲಾ ಮುಖ್ಯ ಶಿಕ್ಷಕಿಯಾದ ಯಶಸ್ವಿನಿ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಮಹೇಂದ್ರ, ತಾಂತ್ರಿಕ ಸಂಯೋಜಕರಾದ ನಿರಂಜನ್, ತಾಲ್ಲೂಕು ಐ.ಇ.ಸಿ.ಸಂಯೋಜಕರಾದ ನರೇಂದ್ರ, ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತರು ಐಶ್ವರ್ಯ ಚಾರಿಟೆಬಲ್ ಟ್ರಸ್ಟ್ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ಸಿಬ್ಬಂದಿಗಳು, ನಿಟ್ಟೂರು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳಾದ ಪೂಣಚ್ಚ, ಉಷಾ ಹಾಗೂ ನಿಟ್ಟೂರು ಗ್ರಾಮ ಪಂಚಾಯಿತಿಯ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!