ಮೀಸಲಾತಿ ಹೋರಾಟದಲ್ಲಿ ಈಶ್ವರಪ್ಪ ಭಾಗಿ

ಬೆಂಗಳೂರು: ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿರುವ ಸಚಿವರು ಬಗ್ಗೆ ಹಾಗೂ ಮೀಸಲಾತಿ ಹೋರಾಟದ ಸ್ಥಿತಿಗತಿ ಬಗ್ಗೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರುಗಳಿಗೆ ವರದಿ ಕೇಳಿದೆ.

ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು ಹಲವರು ಸಚಿವರುಗಳು ಈ ಹೋರಾಟಕ್ಕೆ ಬೆಂಬಲ ನೀಡಿದ್ದು ಕೇಂದ್ರ ಬಿಜೆಪಿ ನಾಯಕರುಗಳು ಗರಂ ಆಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಹಲವು ಸಚಿವರುಗಳು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಾರೆ, ಸಚಿವರುಗಳಾದ ಬಿ. ಶ್ರೀರಾಮುಲು, ಈಶ್ವರಪ್ಪ ಅವರ ಬಗ್ಗೆ ಹೈಕಮಾಂಡ್ ಮಾಹಿತಿ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಮೀಸಲಾತಿ ಹೋರಾಟದಲ್ಲ ಭಾಗವಹಿಸದಂತೆ ತಮ್ಮ ಸಂಪುಟ ಸದಸ್ಯರಿಗೆ ಭಾಗವಹಿಸದಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದರು.

ಮೀಸಲಾತಿ ಹೋರಾಟದ ಸ್ಥಾನಮಾನ, ಜಾತಿವಾರು ಹೋರಾಟದ ಬೇಡಿಕೆಗಳ ಬಗ್ಗೆ ಮುಂದಿನ ವಾರದೊಳಗೆ ವಿವರಣೆ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ವರದಿ ಸಲ್ಲಿಸುವಂತೆ ಜೆಪಿ ನಡ್ಡಾ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೀಸಲಾತಿಗೆ ಸಂಬಂಧಿಸಿದಂತೆ ಪಕ್ಷದ ಯಾವುದೇ ಮುಖಂಡರು ಕಮಿಟ್ ಆಗದಂತೆ ರಾಜ್ಯ ಬಿಜೆಪಿ ನಾಯಕರುಗಳಿಗೆ ಕೇಂದ್ರ ಗೃಹ ಸಚಿವ ಇತ್ತೀಚೆಗೆ ನಡೆದ ಕೊರ್ ಕಮಿಟಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಮೀಸಲಾತಿ ಹೋರಾಟ ಬಿಜೆಪಿ ನಾಯಕರೊಬ್ಬರಿಂದ ಆರಂಭವಾಯಿತು. ನಂತರ ಅದು ದೊಡ್ಡದಾಯಿತು, ಆದರೆಸಚಿವರುಗಳು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದು ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರ ಉಂಟು ಮಾಡಿತು. ಕೇಂದ್ರ ಸಚಿವರುಗಳಿಗೂ ಇದು ಅಸಮಾಧಾನ ಉಂಟು ಮಾಡಿತ್ತು. ಈ ಸಂಬಂಧ ಸಿಎಂ ಯಡಿಯೂರಪ್ಪ ಮತ್ತು ಹೋರಾಟದಲ್ಲಿ ಭಾಗವಹಿಸಿದ್ದ ಸಚಿವರುಗಳಿಗೆ ಕೇಂದ್ರ ನಾಯಕರು ಪ್ರಬಲ ಸಂದೇಶ ರವಾನಿಸಿದ್ದಾರೆ ಎಂದು ನಾಯಕರೊಬ್ಬರು ತಿಳಿಸಿದ್ದಾರೆ.

ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಮೀಸಲಾತಿ ನೀಡಬೇಕು, ಕರ್ನಾಟಕದ ಈ ಆಂದೋಲನವು ರಾಜಕೀಯ ಪ್ರೇರಿತವಾಗಿದೆ ಮತ್ತು ಒಳ್ಳೆಯದಲ್ಲ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದ್ದಾರೆ.

error: Content is protected !!
satta king chart